Index   ವಚನ - 8    Search  
 
ಜಡ ಅಜಡವೆಂಬುಭಯ ಕೂಟ ಉಳ್ಳನ್ನಕ್ಕ ನಾನೆಂಬುದದೇನು? ವಿಚಾರಕ್ಕೆ ನೀನೆಂಬುದದೇನು? ಗೆಲ್ಲ ಸೋಲಕ್ಕೆ ಹೋರಿ ಒಳ್ಳಿದನಾದನೆಂಬಲ್ಲಿಯೆ ಕಳ್ಳ ಕದ್ದ ಗಜವೆಲ್ಲಿ ಅಡಗಿ ಮಾರೂದು ಹೇಳಾ. ಬಲ್ಲವನಾದೆನೆಂಬಲ್ಲಿಯೆ ಉಳಿಯಿತ್ತು ನಿಜಗುಣಯೋಗಿಯ ಯೋಗಕ್ಕೆ ಸಲ್ಲದ ಗುಣ.