Index   ವಚನ - 33    Search  
 
ಅಲ್ಲಲ್ಲಿಯ ಶರಣರು ಅಲ್ಲಲ್ಲಿಯೇ ನಿಲಲು, ಅಲ್ಲಲ್ಲಿಯ ಭಕ್ತಿ ಅಲ್ಲಲ್ಲಿಯೆ ಅಡಗಿತ್ತು. ಅಲ್ಲಲ್ಲಿಯ ಕಾಯವಲ್ಲಲ್ಲಿಯೆ ಸಂದು ಅಲ್ಲಲ್ಲಿಯೆ ಅಡಗಿಯಾನು ಅನುಮಿಷ ದೃಷ್ಟಿಯುಳ್ಳವಳಾದೆನು. ಅಲ್ಲಲ್ಲಿಯೇ ಭ್ರಮಿಸಲು ಭ್ರಮೆಯಡಗಿ ಸಂಗಯ್ಯನಲ್ಲಿ ಮುಖವರಿತೆನಯ್ಯ ಬಸವಪ್ರಭುವೆ.