Index   ವಚನ - 42    Search  
 
ಆದಿ ಅನಾದಿ ತತ್ವವ ಭೇದಿಸಿಕೊಟ್ಟ ಗುರುವೆ, ಅಪ್ರಮಾಣದ ಬೆಳಗ ಭೇದಿಸಿಕೊಟ್ಟ ಗುರುವೆ, ಅಕಾರ ಉಕಾರ ಮಕಾರ ಕಳೆಯನರುಹಿಸಿಕೊಟ್ಟ ಗುರುವೆ, ಇಷ್ಟ ಪ್ರಾಣ ಭಾವವಿದೆಂದು ತೋರಿದ ಗುರುವೆ, ನಿಜದರಿವನರುಹಿಸಿಕೊಟ್ಟ ಗುರುವೆ, ನಿರ್ಮಳ ಪ್ರಭೆಯ ತೋರಿದ ಗುರುವೆ, ನಿಜವನನುಭವಕ್ಕೆ ತಂದ ಗುರುವೆ ನಿಮ್ಮ ಘನವ ಕಾಬ ಕಣ್ಣು ಕ್ರಮಗೆಟ್ಟಿತ್ತು ಸಂಗಯ್ಯಾ, ಬಸವನ ಪ್ರಭೆ ಎಲ್ಲಿ ಅಡಗಿತ್ತೊ.