Index   ವಚನ - 104    Search  
 
ಎಸಳದಳವನಳಿದು ನಿಂದ ಬಸವಾ, ದಳರೂಪಿತದಲ್ಲಿ ಕುರುಹಡಗಿದ ಬಸವಾ, ಕುರುಹಿನ ರೂಪ ಕಂಡು ದೃಢ ಸ್ವರೂಪನರಿದು ಅನುಭಾವಿಯಾಗಿ ಅನುಭಾವದಿಂದ ಮುಕ್ತಿಯ ಕಂಡು ಮುಖವಿಕಸಿತವನೆಯ್ದಿ ನಿಂದನಯ್ಯ ಸಂಗಯ್ಯನಲ್ಲಿ ಬಸವಯ್ಯನು.