Index   ವಚನ - 141    Search  
 
ಕಾಮಿತಸುಖವ ಕಂಗೊಳಿಸಿದ ಗುರುವೆ, ಕಲ್ಪಿತವ ನಷ್ಟವ ಮಾಡಿದ ಗುರುವೆ, ಎನಲಿಲ್ಲದ ಮೂರ್ತಿಯೆ ಎತ್ತಲಡಗಿದೆಯಯ್ಯಾ ಗುರುವೆ? ಸುಖದುಃಖವನೊಂದು ರೂಪಮಾಡಿದ ಗುರುವೆ, ಎತ್ತಲಡಗಿದೆಯಯ್ಯಾ, ಸಂಗಯ್ಯನ ಗುರುಬಸವಾ.