Index   ವಚನ - 179    Search  
 
ನಾನಾರ ಸಾರುವೆನೆಂದು ಚಿಂತಿಸಲೇತಕ್ಕಯ್ಯಾ ಬಸವಾ? ನಾನಾರ ಹೊಂದುವೆನೆಂದು ಭ್ರಮೆಬಡಲೇತಕ್ಕಯ್ಯಾ ಬಸವಾ? ನಾನಾರ ಇರವನರಿವೆನೆಂದು ಪ್ರಳಾಪಿಸಲೇತಕ್ಕಯ್ಯಾ ಬಸವಾ? ಪರಿಣಾಮಮೂರ್ತಿ ಬಸವನರೂಪು ಎನ್ನ ಕರಸ್ಥಲದಲ್ಲಿ ಬೆಳಗಿದ ಬಳಿಕ ಸಂಗಯ್ಯನ ಹಂಗು ನಮಗೇತಕ್ಕಯ್ಯಾ ಬಸವಾ?