Index   ವಚನ - 187    Search  
 
ನಿಷ್ಠೆಯೆಂಬುದನೊಂದ ತೋರಿ ಇಷ್ಟಪ್ರಾಣಭಾವದಲ್ಲಿ ಕಷ್ಟವನಳಿದೆನಯ್ಯ. ಕಾಯದ ಸಂಗವಳಿದು ಕಾಮನಿಃಕಾಮವಾಗಿ ನಿಂದೆನಯ್ಯ. ಅನುಭವ ಸುಖವಳಿದು ಅಪ್ರತಿಮ ಇರವ ಕಂಡು ಬದುಕಿದೆನಯ್ಯ, ಸಂಗಯ್ಯ ಬಸವನಡಗಿದ ಕಾರಣ ಕಾಯವನಾನಳಿದೆನು.