Index   ವಚನ - 204    Search  
 
ಬಸವಣ್ಣನೆ ಗುರುವೆಂದು ಭಾವಿಸಲಾಗಿ, ಎನಗೆ ಬಸವಣ್ಣನೆ ಗುರುವಾದನಯ್ಯಾ. ಚೆನ್ನಬಸವಣ್ಣನೆ ಲಿಂಗವೆಂದು ಭಾವಿಸಲಾಗಿ, ಎನಗೆ ಚೆನ್ನಬಸವಣ್ಣನೆ ಲಿಂಗವಾದನಯ್ಯಾ. ಪ್ರಭುದೇವರೆ ಜಂಗಮವೆಂದು ಭಾವಿಸಲಾಗಿ, ಎನಗೆ ಪ್ರಭುದೇವರೆ ಜಂಗಮವಾದನಯ್ಯಾ. ಚಿಲ್ಲಾಳದೇವನೆ ದೇಹವೆಂದು ಭಾವಿಸಲಾಗಿ, ಎನಗೆ ಚಿಲ್ಲಾಳದೇವನೆ ದೇಹವಾದನಯ್ಯಾ. ಎನಗೆ ಇಹಃಪಗೆಯಾಂಡರೆ ಧನವೆಂದು ಭಾವಿಸಲಾಗಿ, ಇಹಃಪಗೆಯಾಂಡರೆ ಧನವಾದನಯ್ಯಾ. ಇಂತೀ ಐವರ ಕಾರುಣ್ಯಪ್ರಸಾದವನುಂಡು ಮಹಾಮನೆಯಲ್ಲಿ ಸುಖಿಯಾದೆ, ಸಂಗಯ್ಯಾ.