Index   ವಚನ - 224    Search  
 
ಮಡದಿ ಎನಲಾಗದು ಬಸವಂಗೆ ಎನ್ನನು. ಪುರುಷನೆನಲಾಗದು ಬಸವನ ಎನಗೆ. ಉಭಯದ ಕುಳವ ಹರಿದು ಬಸವಂಗೆ ಶಿಶುವಾನಾದೆನು, ಬಸವನೆನ್ನ ಶಿಶುವಾದನು. ಪ್ರಮಥರು ಪುರಾತರು ಸಾಕ್ಷಿಯಾಗಿ ಸಂಗಯ್ಯನಿಕ್ಕಿದ ದಿಬ್ಯವ ಮೀರದೆ ಬಸವನೊಳಗಾನಡಗಿದೆ.