Index   ವಚನ - 249    Search  
 
ಮುನ್ನಳ ದೋಷವೆನ್ನ ಬೆನ್ನಬಿಡದಯ್ಯ, ಮುನ್ನಳ ಪಾಪವೆನ್ನ ಹಿಂದುವಿಡಿದು, ಮುಂದೆ ನಡೆಯಲೀಯದು. ಕಾಮಿತ ನಿಃಕಾಮಿತವ ಕಂಡು, ಬಸವನನರಿಯದೆ ಕೆಟ್ಟ ಪಾಪಿಯಾನು. ಶಬ್ದದ ಹಂಗಿಗಳಲ್ಲಯ್ಯ ನಾನು ಸಂಗಯ್ಯನಲ್ಲಿ ಸ್ವಯಲಿಂಗಸಂಬಂಧವೆನಗೆಂತಯ್ಯ.?