Index   ವಚನ - 2    Search  
 
ವರ್ಣವಿಲ್ಲದ ಲಿಂಗಕ್ಕೆ ರೂಪು ಪ್ರತಿಷ್ಠೆಯ ಮಾಡುವ ಪರಿಯಿನ್ನೆಂತೊ? ಪ್ರಳಯವಿಲ್ಲದ ಲಿಂಗಕ್ಕೆ ಪ್ರಾಣಪ್ರತಿಷ್ಠೆಯ ಮಾಡುವ ಪರಿಯಿನ್ನೆಂತೊ? ನೆನೆಯಬಾರದ ಲಿಂಗಕ್ಕೆ ಅನುಗ್ರಹವ ಮಾಡುವ ಪರಿಯಿನ್ನೆಂತೊ? ನುಡಿಯಬಾರದ ಲಿಂಗಕ್ಕೆ ಜಪಪೂಜೆಯದೆಂತೊ? ಇಲ್ಲದ ಲಿಂಗವ ಧರಿಸುವ ಪರಿಯಿನ್ನೆಂತೊ? ಮಹಾಮಹಿಮ ಮಾಗುಡದ ಮಲ್ಲಿಕಾರ್ಜುನಾ ಇದರಂತುವ ನೀವೆ ಬಲಿರಿ.