Index   ವಚನ - 2    Search  
 
ಆವಾವ ಕಾಯಕದಲ್ಲಿ ಬಂದಡೂ ಭಾವಶುದ್ಧವಾಗಿ ಗುರು-ಲಿಂಗ-ಜಂಗಮಕ್ಕೆ ಮಾಡುವುದೇ ಶಿವಪೂಜೆ. ಮಾಡುವ ಮಾಟವಿಲ್ಲದೆ ಮಾತಿಂಗೆ ಮಾತಾಡುವುದು ಅದೇತರ ಪೂಜೆ? ಅದು ಚಂದೇಶ್ವರಲಿಂಗಕ್ಕೆ ಒಪ್ಪವಲ್ಲ, ಮಡಿವಾಳಯ್ಯಾ.