Index   ವಚನ - 3    Search  
 
ಇದಿರ ಭೂತಹಿತಕ್ಕಾಗಿ ಗುರುಭಕ್ತಿಯ ಮಾಡಲಿಲ್ಲ. ಅರ್ತಿಗಾರಿಕೆಯಾಗಿ ಲಿಂಗವ ಬಿಟ್ಟು ಪೂಜಿಸಲಿಲ್ಲ. ರಾಜ ಚೋರರ ಭಯಕ್ಕಂಜಿ ಜಂಗಮ ದಾಸೋಹವ ಮಾಡಲಿಲ್ಲ. ಆವ ಕೃಪೆಯಾದಡೂ ಭಾವ ಶುದ್ಧವಾಗಿರಬೇಕು, ಚನ್ನಬಸವಣ್ಣಪ್ರಿಯ ಚಂದೇಶ್ವರಲಿಂಗವನರಿಯಬಲ್ಲಡೆ.