Index   ವಚನ - 9    Search  
 
ಕಂದಿಸಿ ಕುಂದಿಸಿ ಬಂಧಿಸಿ ಕಂಡವರ ಬೇಡಿತಂದು ಜಂಗಮಕ್ಕೆ ಮಾಡಿಹೆನೆಂಬ ದಂದುಗದೋಗರ ಲಿಂಗಕ್ಕೆ ನೈವೇದ್ಯ ಸಲ್ಲ. ತನು ಕರಗಿ ಮನ ಬಳಲಿ ಬಂದ ಚರದ ಅನುವರಿತು ಸಂದಿಲ್ಲದೆ ಸಂಶಯವಿಲ್ಲದೆ ಜಂಗಮಲಿಂಗಕ್ಕೆ ದಾಸೋಹವ ಮಾಡುವುದೆ ಮಾಟ. ಕಾಶಿಯ ಕಾಯಿ ಕಾಡಿನ ಸೊಪ್ಪಾಯಿತ್ತಾದಡೂ ಕಾಯಕದಿಂದ ಬಂದುದು ಲಿಂಗಾರ್ಪಿತ. ಚನ್ನಬಸವಣ್ಣಪ್ರಿಯ ಚಂದೇಶ್ವರಲಿಂಗಕ್ಕೆ ನೈವೇದ್ಯ ಸಂದಿತ್ತು.