Index   ವಚನ - 13    Search  
 
ಗುರು ಇಷ್ಟವ ಕೊಟ್ಟು ಕೂಲಿಗೆ ಕಟ್ಟಿದ ಲಿಂಗ ದೃಷ್ಟವ ತೋರಿ ತನ್ನ ರಜತದ ಬೆಟ್ಟದ ಮೇಲಿರಿಸಿದ. ಇಂತು ಗುರುಲಿಂಗಕ್ಕೆ ಮಾಡಿ ಹಿಂದಣ ಮುಂದಣ ಸಂದೇಹಕ್ಕೀಡಾದೆ. ಪ್ರಸಿದ್ಧವಪ್ಪ ಜಂಗಮಲಿಂಗಕ್ಕೆ ಸಂದೇಹವಿಲ್ಲದೆ ಮನಸಂದು ಮಾಡಲಾಗಿ ಚಂದೇಶ್ವರಲಿಂಗಕ್ಕೆ ಹಿಂದುಮುಂದೆಂಬುದಿಲ್ಲ.