Index   ವಚನ - 21    Search  
 
ಗುರುವಾದಡೂ ಕಾಯಕದಿಂದವೆ ಜೀವನ್ಮುಕ್ತಿ. ಲಿಂಗವಾದಡೂ ಕಾಯಕದಿಂದವೆ ವೇಷದ ಪಾಶ ಹರಿವುದು. ಗುರುವಾದಡೂ ಚರಸೇವೆಯ ಮಾಡಬೇಕು ಲಿಂಗವಾದಡೂ ಚರಸೇವೆಯ ಮಾಡಬೇಕು. ಜಂಗಮವಾದಡೂ ಚರಸೇವೆಯ ಮಾಡಬೇಕು. ಚೆನ್ನಬಸವಣ್ಣಪ್ರಿಯ ಚಂದೇಶ್ವರಲಿಂಗದ ಅರಿವು.