Index   ವಚನ - 42    Search  
 
ಶಿಷ್ಯಂಗೆ ಗುರು ಬೋಧಿಸುವಲ್ಲಿ ತನ್ನನಳಿದು ಲಿಂಗದ ಸಂಗವ ತೋರಿಸಬೇಕು. ಲಿಂಗದ ಸಂಗ ನೆನಹಾದಲ್ಲಿ ಆ ಲಿಂಗಕ್ಕೆ ಉಂಬ ಬಾಯಿ ಜಂಗಮವಾದ ಕಾರಣ ಆ ಜಂಗಮದ ದಾಸೋಹದಿಂದ ಬೇರೊಂದಂಗವಿಲ್ಲ; ಸಂಗನ ಬಸವಣ್ಣಪ್ರಿಯ ಚಂದೇಶ್ವರಲಿಂಗವ ಹಿಂಗದ ಭಾವ.