ಸತ್ಯ ಶುದ್ಧ ಕಾಯಕದಿಂದ ಬಂದ ದ್ರವ್ಯದಲ್ಲಿ
ಚಿತ್ತ ವಿಚ್ಛಂದವಾಗದಿರಬೇಕು.
ನೇಮದ ಕೂಲಿಯಂದಿನ ನಿತ್ಯ ನೇಮದಲ್ಲಿ ಸಂದಿಲ್ಲದಿರಬೇಕು.
ನೇಮದ ಕೂಲಿಯ ಬಿಟ್ಟು
ಹೇಮದಾಸೆಗೆ ಕಾಮಿಸಿ ದ್ರವ್ಯದ ಹಿಡಿದಡೆ
ತಾ ಮಾಡುವ ಸೇವೆ ನಷ್ಟವಯ್ಯಾ.
ನಿನ್ನಾಸೆಯ ವೇಷದ ಪಾಶಕ್ಕೆ ನೀನೆ ಹೋಗು.
ನನಗೆ ನಮ್ಮ ಜಂಗಮದ ಪ್ರಸಾದದಾಗೆ
ಚಂದೇಶ್ವರಲಿಂಗಕ್ಕೆ ಪ್ರಾಣವಯ್ಯಾ.