Index   ವಚನ - 4    Search  
 
ಬಹಳ ಬಹಳ ಕಂಡೆನೆಂದು ನುಡಿವ, ಬಿಸಿಲು ಮಧ್ಯಾಹ್ನದಲ್ಲಿ ಚಂದ್ರಬಿಂಬ ಉದಯವಾದ ಪ್ರತ್ಯಕ್ಷವಾಯಿತ್ತೆಂದು ಹೊರಗೆ ಕಂಡು ಒಳಗೆ ಕಂಡನಲ್ಲದೆ ಏನು ಅಪ್ಪುದು ಕಾಣಾ. ಎರಡೂ ಒಂದೇ. ಮುಂದೆ ಮೀರಿ ಮನಸಮಾಧಿ ಮಾಡಿದಡೆ ಮುಕ್ತಿಯೆಂದು ಹೇಳುವರು. ಮನ ಮುಳುಗಿದುದೆ ಲಿಂಗವೆಂದೆಂಬರು. ಆ ಲಿಂಗ ಮುಳುಗುವುದು ಸಮಾಧಿ ಕಾಣಾ, ತಾನಳಿದ ಮೇಲೆ ಮುಕ್ತಿ ಯಾರಿಗೆ ಹೇಳಾ? ಲಿಂಗಕ್ಕೆ ಅಳಿವು ಬೆಳವುಂಟೆ ಕಾಣಾ? ಚಿಂತಿಸಿ ಮುಳುಗಿದವರೆಲ್ಲ ಕಡೆಯಿಲ್ಲ ಮೊದಲಿಲ್ಲ ನೋಡಾ. ಇನ್ನು ಉಳಿದದ್ದು ಘನವು. ಉಳಿಯೆ ಹೇಳಾ ನಿಜಕೆಲ್ಲ. ಲಯವಿಲ್ಲ ಭಯವಿಲ್ಲದಾಡಿದ ವಿದೇಹ ತಾನಾದ ವರನಾಗನ ಗುರುವೀರನೆ ಪರಂಜ್ಯೋತಿ ಮಹಾವಿರಕ್ತಿ.