Index   ವಚನ - 6    Search  
 
ನೆನೆವ ಮನಕ್ಕೆ ಮಣ್ಣನೆ ತೋರಿದೆ. ನೋಡುವ ಕಣ್ಣಿಗೆ ಹೆಣ್ಣನೆ ತೋರಿದೆ. ಪೂಜಿಸುವ ಕೈಗೆ ಹೊನ್ನನೆ ತೋರಿದೆ. ಇಂತೀ ತ್ರಿವಿಧವನೆ ತೋರಿ ಕೊಟ್ಟು ಮರಹನಿಕ್ಕಿದೆಯಯ್ಯಾ. ಅಮರಗುಂಡದ ಮಲ್ಲಿಕಾರ್ಜುನಯ್ಯಾ ನೀ ಮಾಡಿದ ಬಿನ್ನಾಣಕ್ಕೆ ನಾನು ಬೆರಗಾದೆನು.