Index   ವಚನ - 25    Search  
 
ಓಂ ಎಂಬುದು ಬ್ರಹ್ಮಾಕ್ಷರ. ನ ಎಂಬುದು ನಾರಾಯಣ ಬೀಜ. ಮ ಎಂಬುದು ಮಹಾದೇವನ ಬೀಜಾಕ್ಷರ. ಇಂತೀ ತ್ರಿವಿಧ ಭೇದ ಕೂಡಿದಲ್ಲಿ ಈಶ್ವರತತ್ವ. ಇಂತೀ ಭೇದ: ಪಂಚವಿಂಶತ್ತತ್ವವಾಗಲಾಗಿ ಆಚಾರ್ಯನ ಅಂಗಭೇದ. ಇಂತೀ ಕ್ರೀಮಾರ್ಗದ ನಿಜ ಅರಿವಿನ ಆಚರಣೆ, ಉಭಯವು ಏಕವಾದಲ್ಲಿ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವು ಸಯರೂಪಾದಂಗ.