Index   ವಚನ - 74    Search  
 
ಲಿಂಗವೇ ಪ್ರಾಣವಾದ ಮತ್ತೆ ಬೇರೆ ನೆನೆಯಿಸಿಕೊಂಬುದು ಇನ್ನಾವುದಯ್ಯಾ? ಇದಿರಿಟ್ಟು ಬಂದುದ ಮುನ್ನವೆ ಮುಟ್ಟಿ ಅರ್ಪಿತ ಅವಧಾನಂಗಳಲ್ಲಿ ಸೋಂಕಿದ ಮತ್ತೆ ಪುನರಪಿಯಾಗಿ ಸೋಂಕಿದಡೆ ನಿರ್ಮಾಲ್ಯ ಕಂಡಯ್ಯಾ. ಮೊನೆಗೂಡಿ ಹಾಯ್ವ ಕಣೆಯಂತೆ ಅರ್ಪಿತಾಂಗ ಸಂಗಭೇದ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವನರಿದಲ್ಲಿ.