Index   ವಚನ - 82    Search  
 
ವೃಕ್ಷ ಎಲೆಗಳೆವುದಲ್ಲದೆ ತರುವಿನ ಸಲೆ ನೆಲೆ ಸಾರಗಳದು ಫಲಿಸುವುದುಂಟೆ? ಅಂಗದಲ್ಲಿ ಸೋಂಕಿದ ಮರವೆಯ ಕಳೆಯಬಹುದಲ್ಲದೆ ಮನ ವಚನ ಕಾಯ ತ್ರಿಕರಣದಲ್ಲಿ ವೇಧಿಸಿದ ಮರವೆಯ ಹರಿವ ಪರಿಯಿನ್ನೆಂತೊ? ಉರಿ ವೇಧಿಸಿದ ತರುವಿನಂತೆ ಅದಕ್ಕೆ ಪರಿಹರವಿಲ್ಲ. ಅರಿದು ಮಾಡುವ ದೋಷಕ್ಕೆ ಪಡಿಪುಚ್ಚವಿಲ್ಲ. ಆ ಭೇದವನರಿದು ಹರಿಯಬೇಕು ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.