Index   ವಚನ - 3    Search  
 
ಕಣ್ಣು ನೋಡಿ ಅರ್ಪಿಸಿದ ಪ್ರಸಾದ ಅದಾವ ಲಿಂಗಕ್ಕೆ? ಕಿವಿ ಕೇಳಿ ಅರ್ಪಿಸಿದ ಪ್ರಸಾದ ಅದಾವ ಲಿಂಗಕ್ಕೆ? ಘ್ರಾಣ ವಾಸಿಸಿ ಅರ್ಪಿಸಿದುದು ಅದಾವ ಲಿಂಗಕ್ಕೆ? ಜಿಹ್ವೆಯ ಕೊನೆಯಲ್ಲಿ ಸವಿದು ಅರ್ಪಿಸಿದುದು ಅದಾವ ಲಿಂಗಕ್ಕೆ? ಕರ ಮುಟ್ಟಿದ ಸೋಂಕಿನ ಸುಖ ಅದಾವ ಲಿಂಗಕ್ಕೆ? ಇಂತೀ ಪಂಚೇಂದ್ರಿಯಂಗಳಲ್ಲಿ ಅರ್ಪಿಸಿಕೊಂಬ ಆತ್ಮನ ತೃಪ್ತಿ ಐದೋ ಮೂರೋ ಬೇರೆರಡೋ ಏಕವೋ? ಎಂಬುದ ನಿಧಾನಿಸಿ ಬಹುವೆಜ್ಜದ ಕುಂಭದಲ್ಲಿ ಅಗ್ನಿಯನಿರಿಸಿ ಉರುಹಲಿಕೆ ವೆಜ್ಜ ವೆಜ್ಜಕ್ಕೆ ತಪ್ಪದೆ ಕಿಚ್ಚು ಹೊದ್ದಿ ತೋರುವದು ವೆಜ್ಜದ ಗುಣವೋ ? ಒಂದಗ್ನಿಯ ಗುಣವೋ ? ಇಂತೀ ಗುಣವ ನಿಧಾನಿಸಿಕೊಂಡು ನಿಜಪ್ರಸಾದವ ಕೊಂಬ ಸ್ವಯಪ್ರಸಾದಿಗೆ ತ್ರಿವಿಧಪ್ರಸಾದ ಸಾಧ್ಯವಪ್ಪುದಲ್ಲದೆ ವರ್ತಕಪ್ರಸಾದಿಗಳಿತ್ತಲೆ ಉಳಿದರು. ದಹನ ಚಂಡಿಕೇಶ್ವರಲಿಂಗಕ್ಕೆ ಅರ್ಪಿತ ಮುಟ್ಟದೆ ಹೋಯಿತ್ತು.