ಬಸವಣ್ಣ   
Index   ವಚನ - 225    Search  
 
ಹತ್ತು ಮತ್ತರದ ಭೂಮಿ, ಬತ್ತುವ ಹಯನು, ನಂದಾದೀವಿಗೆಯ ನಡೆಸಿಹೆವೆಂಬವರ ಮುಖವ ನೋಡಲಾಗದು; ಅವರ ನುಡಿಯ ಕೇಳಲಾಗದು. ಅಂಡಜ, ಸ್ವೇದಜ, ಉದ್ಬಿಜ, ಜರಾಯುಜರೆಂಬ ಪ್ರಾಣಿಗಳಿಗೆ ಭವಿತವ್ಯವ ಕೊಟ್ಟವರಾರೋ? ಒಡೆಯರಿಗೆ ಉಂಡಲಿಗೆಯ ಮುರಿದಿಕ್ಕಿದಂತೆ "ಎನ್ನಿಂದಲೆ ಆಯಿತ್ತು, ಎನ್ನಿಂದಲೆ ಹೋಯಿತ್ತು" ಎಂಬವನ ಬಾಯಲ್ಲಿ ಮೆಟ್ಟಿ ಹುಡಿಯ ಹೊಯ್ಯದೆ ಮಾಣ್ಬನೆ ಕೂಡಲಸಂಗಮದೇವ?