ಬಸವಣ್ಣ   
Index   ವಚನ - 255    Search  
 
ಇರಿಸಿಕೊಂಡು ಭಕ್ತರಾದರೆಮ್ಮವರು; ತರಿಸಿಕೊಂಡು ಭಕ್ತರಾದರೆಮ್ಮವರು; ಕೊರೆಯಿಸಿಕೊಂಡು ಭಕ್ತರಾದರೆಮ್ಮವರು; ಜರೆಯಿಸಿಕೊಂಡು ಭಕ್ತರಾದರೆಮ್ಮವರು; ಕೂಡಲಸಂಗನ ಶರಣರಿಗೆ ಮುಳಿಸ ತಾಳಿ ಎನ್ನ ಭಕ್ತಿ ಅರೆಯಾಯಿತ್ತು!