ಬಸವಣ್ಣ   
Index   ವಚನ - 421    Search  
 
ಮರಕ್ಕೆ ಬಾಯಿ ಬೇರೆಂದು ತಳಕ್ಕೆ ನೀರೆರದರೆ ಮೇಲೆ ಪಲ್ಲವಿಸಿತ್ತು ನೋಡಾ! ಲಿಂಗದ ಬಾಯಿ ಜಂಗಮವೆಂದು ಪಡಿಪದಾರ್ಥವ ನೀಡಿದರೆ ಮುಂದೆ ಸಕಲ ಪದಾರ್ಥವನೀವನು! ಆ ಜಂಗಮವ ಹರನೆಂದು ಕಂಡು ನರನೆಂದು ಭಾವಿಸಿದರೆ ನರಕ ತಪ್ಪದು, ಕಾಣಾ, ಕೂಡಲಸಂಗಮದೇವಾ!