ಬಸವಣ್ಣ   
Index   ವಚನ - 502    Search  
 
ಹೊನ್ನ ಹಾವುಗೆಯ ಮೆಟ್ಟಿದವನ, ಮಿಡಿಮುಟ್ಟಿದ ಕೆಂಜೆಡೆಯವನ; ಮೈಯಲ್ಲಿ ವಿಭೂತಿಯ ಧರಿಸಿದವನ, ಕರದಲ್ಲಿ ಕಪಾಲವ ಪಿಡಿದವನ, ಅರ್ಧನಾರಿಯಾದವನ, ಬಾಣನ ಬಾಗಿಲ ಕಾಯ್ದವನ; ನಂಬಿಗೆ ಕುಂಟಣಿಯಾದವನ, ಚೋಳಂಗೆ ಹೊನ್ನಮಳೆಯ ಕರೆದವನ; ಎನ್ನ ಮನಕ್ಕೆ ಬಂದವನ, ಸದ್ಭಕ್ತರ ಹೃದಯದಲಿಪ್ಪವನ; ಮಾಡಿದ ಪೂಜೆಯಲೊಪ್ಪುವನ, ಕೂಡಲಸಂಗಯ್ಯನೆಂಬವನ!