ಬಸವಣ್ಣ   
Index   ವಚನ - 556    Search  
 
ಹಾಳು ಮೊರಡಿಗಳಲ್ಲಿ ಊರ ದಾರಿಗಳಲ್ಲಿ, ಕೆರೆ ಬಾವಿ ಹೂಗಿಡುಮರಂಗಳಲ್ಲಿ, ಗ್ರಾಮ ಮಧ್ಯಗಳಲ್ಲಿ, ಚೌಪಥ ಪಟ್ಟಣಪ್ರವೇಶದಲ್ಲಿ, ಹಿರಿಯಾಲದ ಮರದಲ್ಲಿ ಮನೆಯ ಮಾಡಿ, ಕರೆವೆಮ್ಮೆಯ, ಹಸುಗೂಸು ಬಸುರಿ ಬಾಣತಿ ಕುಮಾರಿ ಕೊಡಗೂಸೆಂಬವರ ಹಿಡಿದು ತಿಂಬ, ತಿರಿದುಂಬ, ಮಾರಯ್ಯ ಬೀರಯ್ಯ ಕೇಚರಗಾವಿಲ ಅಂತರ ಬೆಂತರ ಕಾಳಯ್ಯ ಮಾರಯ್ಯ ದೂಳಯ್ಯ ಕೇತಯ್ಯಗಳೆಂಬ ನೂರು ಮಡಕೆಗೆ ನಮ್ಮ ಕೂಡಲಸಂಗಮದೇವ ಶರಣೆಂಬುದೊಂದು ದಡಿ ಸಾಲದೆ?