ಬಸವಣ್ಣ   
Index   ವಚನ - 728    Search  
 
ಲಿಂಗಕ್ಕಲ್ಲದೆ ಮಾಡೆನೀ ಮನವನು, ಜಂಗಮಕ್ಕಲ್ಲದೆ ಮಾಡೆನೀ ಧನವನು, ಪ್ರಸಾದಕ್ಕಲ್ಲದೆ ಮಾಡೆನೀ ತನುವನು. 'ಲಿಂಗ ಜಂಗಮದ ಪ್ರಸಾದಕ್ಕಲ್ಲದೆ ಬಾಯ್ದೆರೆ'ಯೆನೆಂಬುದೆನ್ನ ಭಾಷೆ. ಅನರ್ಪಿತವಾದರೆ ತಪ್ಪೆನ್ನದು, ಮೂಗ ಕೊಯಿ, ಕೂಡಲಸಂಗಮದೇವಾ.