ಬಸವಣ್ಣ   
Index   ವಚನ - 845    Search  
 
ಶರಣಸನ್ನಿಹಿತನೈಕ್ಯವಹಲ್ಲಿ ಹರಿಬ್ರಹ್ಮಾದಿಗಳು ಮೊದಲಾದ ತೆತ್ತೀಸಾದಿ ದೇವರ್ಕಳು ʼಉಘೇ ಉಘೇʼ ಎನುತಿರಲು ʼಐಕ್ಯ ಬಸವಣ್ಣಂಗೆ ಠಾವಾವುದಯ್ಯಾ?ʼ ಎಂದೊಡೆ:- ಅಂಗದ ಕಳೆಯಲ್ಲಿ ಬಲದಲ್ಲಿ ಬ್ರಹ್ಮನ ಸ್ಥಾನ, ಎಡದಲ್ಲಿ ನಾರಾಯಣನ ಸ್ಥಾನ, ಒಲ್ಲೆನಯ್ಯಾ! ಕೊರಳು ಗರಳಸ್ಥಾನ, ಬಾಯಿ ಅಪ್ಪುವಿನ ಸ್ಥಾನ, ನಾಸಿಕ ವಾಯುವಿನ ಸ್ಥಾನ, ಕಣ್ಗಳು ಅಗ್ನಿ ಸ್ಥಾನ, ಜಡೆ ಗಂಗೆಯ ಸ್ಥಾನ, ನೊಸಲು ಚಂದ್ರನ ಸ್ಥಾನ, ಹಿಂದು ಸೂರ್ಯನ ಸ್ಥಾನ, ಚರಣಂಗಳು ಅಷ್ಟದಿಕ್ಪಾಲಕರ ಸ್ಥಾನಂಗಳು, ಗುಹ್ಯ ಕಾಮನ ಸ್ಥಾನ, ಹಸ್ತಂಗಳು ಕಪಾಲ ಖಟ್ವಾಂಗ ತ್ರಿಶೂಲ ಡಮರುಗ ಸ್ಥಾನ, ದೇಹ ರುಂಡಮಾಲೆಯ ಸ್ಥಾನ, ಕರ್ಣ ನಾಗೇಂದ್ರನ ಸ್ಥಾನ, ಇಂತೀ ಸ್ಥಾನಂಗಳ ನಾನೊಲ್ಲೆನಯ್ಯಾ! ಹೃದಯಕಮಲ ಮಧ್ಯವ ಅಂತರಾಳದ ಏಕಪೀಠದ ಸಿಂಹಾಸನದ ತೆರಹ ಕೊಡು, ಕೂಡಲಸಂಗಮದೇವಾ!