ಬಸವಣ್ಣ   
Index   ವಚನ - 1064    Search  
 
ಇಹದ ಪೂರ್ವವ ಜರೆದು, ಪರದ ಪೂರ್ವವನರಿದು, ಗುರುಕಾರುಣ್ಯವ ಪಡೆದು, ಅಂತರ್ಬಾಹ್ಯದ ಭವಿಯ ತೊರೆದು ಭಕ್ತಿಪರಾಯಣರಾಗಿ ನಿಂದುದೆ ಲಿಂಗದ ನಿಜದಂಗ. ಅದೆಂತೆಂದಡೆ; 'ತ್ರಿಗುಣಂ ಪಂಚಕಂ ಚೈವ ಚತ್ವಾರಿ ಷಡ್ವಿಧೈವ ಚ ಸಘಾತಂ ವ್ಯಸನಂ ಚೈವ ಇತ್ಯಾದಿ ಭವಿಮಿಶ್ರಿತಂ' ಎಂದುದಾಗಿ, ಅಂತರಂಗದ ಭವಿಯನು ಹಿಂಗಿ, ʼಅನೃತಮಸ್ಥಿರಂ ವಾಕ್ಯಂ ವಂಚನಂ ಪಙ್ತಿಭೇದನಮ್ ಔದಾಸೀನಂ ನಿರ್ದಯತ್ವಂ ಷಡ್ವಿಧಂ ಭವಿಮಿಶ್ರಿತಂʼ ಎಂಬೀ ಮಾನವರಂಗದ ಭವಿಯನು ಕಳೆದು, ಅರ್ಚನಾದಿ ಕ್ರಿಯಾಕಾಲೇ ಪ್ರಚ್ಛನ್ನಂ ಪಟಮುತ್ತಮಮ್ ಪಾಪೀ ಕೋಪೀ ಪರಿ ಭ್ರಷ್ಟೋ ನಾಸ್ತಿಕೋ ವೃತದೂಷಕಃ ‌ʼದುರ್ಜನಶ್ಚ ದುರಾಚಾರೀ ದುರ್ಮುಖಶ್ಚಾಪ್ಯದೀಕ್ಷಿತಃ ಪ್ರಮಾದಾದ್ದೃಶ್ಯತೇ ಯೇನ ತಸ್ಯ ಪೂಜಾ ತು ನಿಷ್ಫಲಂʼ ಎಂಬೀ ಬಹಿರಂಗದ ಭವಿಯನ್ನು ತೊಲಗಿಸಿ, ಇಂತೀ ತ್ರಿವಿಧಭವಿಯನು ದೂರಮಾಡಿ, ಶಿವಭಕ್ತಿಯೆ ಅಂಗವಾದ ಲಿಂಗೈಕ್ಯ ಲಿಂಗಪೂಜಕರಿಗೆ ಪೂರ್ವವರ್ಣಾಶ್ರಮಾದಿ ಸೂತಕವಿಲ್ಲ, ಕೂಡಲಸಂಗಯ್ಯಾ.