ಬಸವಣ್ಣ   
Index   ವಚನ - 1126    Search  
 
ಕಂಡಹರೆಂದು ಕಣ್ಗೆ ಮರೆಮಾಡಿದ, ಕೇಳಿಹರೆಂದು ಕಿವಿಗೆ ಮರೆಮಾಡಿದ, ಮುಟ್ಟಿಹರೆಂದು ಕೈಗೆ ಮರೆಮಾಡಿದ, ಸೋಂಕಿಹರೆಂದು ತನುವಿಂಗೆ ಮರೆಮಾಡಿದ, ನೆನೆದಹರೆಂದು ಮನಕ್ಕೆ ಮರೆಮಾಡಿದ, ಅರಿದಹರೆಂದು ಅಂತರಂಗದಲ್ಲಿ ಮರೆಮಾಡಿದ, ಪೂಜಿಸಿಹರೆಂದು ಕ್ರೀಗೆ ಮರೆಮಾಡಿದ, ಕೂಡಲಸಂಗಮದೇವರೊಡನೆ, ಅಹಂಕಾರವ ಮಾಡಿ ಕೆಟ್ಟ ಕೇಡನೇನೆಂದುಪಮಿಸುವೆನು.