ಬಸವಣ್ಣ   
Index   ವಚನ - 1145    Search  
 
ಕಾಯದ ಕೈಯಲ್ಲಿ ಕರಸ್ಥಲ, ಪ್ರಾಣದ ಕೈಯಲ್ಲಿ ಜಂಗಮಸ್ಥಲ, ಈ ಉಭಯಭಾವದ ಶಿವಲಿಂಗಾರ್ಚನೆ ಪರಮಾನಂದಸುಖಸ್ಥಲ. ಕಾಯ ಭಕ್ತ, ಪ್ರಾಣ ಜಂಗಮ, ಆವುದ ಘನವೆಂಬೆನಾವುದ ಕಿರಿದೆಂಬೆ? ಕೂಡಲಸಂಗನ ಶರಣರು ಬಂದಡೆ ಉಪಚಾರಕ್ಕೆ ಇಂಬಿಲ್ಲ, ಕರುಣದಿಂದ ಬರಹೇಳಾ, ಅಪ್ಪಣ್ಣಾ.