ಬಸವಣ್ಣ   
Index   ವಚನ - 1194    Search  
 
ಜಂಗಮಸೇವೆಯೆ ಗುರುಪೂಜೆಯೆಂದರಿದ, ಜಂಗಮಸೇವೆಯೆ ಲಿಂಗಪೂಜೆಯೆಂದರಿದ, ಜಂಗಮಸೇವೆಯೆ ತನ್ನಿರವೆಂದರಿದ, ಜಂಗಮಸೇವೆಯೆ ತನ್ನ ನಿಜವೆಂದರಿದ, ಜಂಗಮಸೇವೆಯೆ ಸ್ವಯವೆಂದರಿದ, ಜಂಗಮಸೇವೆಯೆ ನಿತ್ಯಪದವೆಂದರಿದ. ಇದು ಕಾರಣ, ನಮ್ಮ ಕೂಡಲಸಂಗಮದೇವರಲ್ಲಿ ಜಂಗಮಪ್ರಾಣಿಯಾದ ಚಂದಯ್ಯನ ಹಳೆ ಮಗನಾಗಿ, ಆತನ ಶ್ರೀಚರಣಕ್ಕೆ ಶರಣೆಂದು ಶುದ್ಧನು, ಆ ಮಹಾಮಹಿಮನ ಘನವ ನಾನೆತ್ತ ಬಲ್ಲೆನಯ್ಯಾ ಪ್ರಭುವೆ?