ಬಸವಣ್ಣ   
Index   ವಚನ - 1289    Search  
 
ಭಕ್ತನ ಕಾಯವ ಜಂಗಮ ಧರಿಸಿಪ್ಪ ನೋಡಾ, ಜಂಗಮದ ಪ್ರಾಣವ ಭಕ್ತ ಧರಿಸಿಪ್ಪ ನೋಡಾ. ಭಕ್ತನಲ್ಲಿಯೂ ಭಕ್ತಜಂಗಮವೆರಡೂ ಸನ್ನಿಹಿತ, ಜಂಗಮದಲ್ಲಿಯೂ ಜಂಗಮಭಕ್ತವೆರಡೂ ಸನ್ನಿಹಿತ, ಜಂಗಮಕ್ಕಾದಡೂ ಭಕ್ತಿಯೆ ಬೇಕು, ಭಕ್ತಂಗೆ ಭಕ್ತಿಸ್ಥಲವೆ ಬೇಕು. ಭಕ್ತನ ಅರ್ಥಪ್ರಾಣಾಭಿಮಾನಕ್ಕೆ ತಾನೆ ಕಾರಣನೆಂದು ಬಂದ ಜಂಗಮ ಆ ಭಕ್ತನ ಮನೆಗೆ ತಾನೆ ಕರ್ತನಾಗಿ ಹೊಕ್ಕು, ತನುಮನಧನಂಗಳೆಲ್ಲವನೊಳಕೊಂಡು, ಆ ಭಕ್ತನ ಪಾವನವ ಮಾಡಬಲ್ಲಡೆ ಆತ ಜಂಗಮವೆಂಬೆ. ಆ ಜಂಗಮದ ಗಳಗರ್ಜನೆಗೆ ಸೈರಿಸಿ, ಮುಡುಹಿಂಗ ಮುನ್ನೂರು ಪಟ್ಟವ ಕಟ್ಟಿದಡೆ ಆತ ಭಕ್ತನೆಂಬೆ. ತನ್ನ ಮಠಕ್ಕೆ ತಾ ಬಹಡೆ ಮುನಿಸುಂಟೆ? ಕೂಡಲಸಂಗನ ಶರಣರ ಮನೆಯ ಬಾಗಿಲುಗಾಹಿ ನಾನಾಗಿರ್ದು ಕರ್ತರು ಗೃಹಕ್ಕೆ ಬಂದಡೆ ಬೇಕು ಬೇಡೆನ್ನೆ.