ಬಸವಣ್ಣ   
Index   ವಚನ - 1296    Search  
 
ಭವವಿಲ್ಲದಡೇನು, ಬಂಧನವಿಲ್ಲದಡೇನು, ಶಿವಗಣಂಗಳೆಲ್ಲರ ಮನಕ್ಕೆ ಬಾರದುದೆ ಭವಬಂಧನ ನೋಡಾ. ಪರಹಿತಾರ್ಥವಾಗಬೇಕೆಂದು ಲಿಂಗವ ಕೊಟ್ಟಡೆ ನಿಮ್ಮ ಪ್ರಮಥರ ಮುಂದೆ ಶಿವ ಮುನಿದು ಮರ್ತ್ಯಲೋಕಕ್ಕೆ ಕಳುಹಿಸಿದನು. ಅಂಗದ ಮೇಲೆ ಲಿಂಗವುಳ್ಳುದೆಲ್ಲವೂ ಸಂಗಮನಾಥನೆಂದು ನಂಬಿದಲ್ಲಿ ನಿಮ್ಮ ಪ್ರಮಥರೆನ್ನನೊಳಗಿಟ್ಟುಕೊಂಡರು. ಜಂಗಮಮುಖದಲ್ಲಿ ಲಿಂಗವನರಿಸಿಕೋ ಎಂದಡೆ ದಾಸೋಹವೆಂಬ ಪಸರವನಿಕ್ಕಿದೆನು. ಕೂಡಲಸಂಗಮದೇವರ ಮುಂದೆ ಜಂಗಮಮುಖದಲ್ಲಿ ಎಂದು ಸುಖಿಯಪ್ಪೆನು ಹೇಳಾ, ಚೆನ್ನಬಸವಣ್ಣಾ.