ಬಸವಣ್ಣ   
Index   ವಚನ - 1300    Search  
 
ಮಡಿವಾಳ ಮಡಿವಾಳನೆಂಬರು, ಮಡಿವಾಳನೆಂಬುದನಾರೂ ಅರಿಯರು, ಎನ್ನ ಮಲತ್ರಯದಲ್ಲಿ ಹೊದಕುಳಿಗೊಂಡ ಮನದ ಮೈಲಿಗೆಯ ತಂದು, ತನ್ನ ಮನೆಗೆ ಕೊಂಡುಹೋಗಿ ಹಾಯ್ಕಿದಡೆ, ಕೈಮುಟ್ಟಿದಡೆ ಆಗದೆಂದು ತನ್ನ ಪಾದದೊಳಗೆ ಮೆಟ್ಟಿ, ಅಲುಬಿ ಸೆಳೆದನಯ್ಯಾ. ತನ್ನ ನಿರ್ಮಲವ ಕೊಟ್ಟನೆನಗೆ, ಆ ಕೊಟ್ಟ ಬೀಳುಡಿಗೆಯ ಹೊದೆದುಕೊಂಡೆನಾಗಿ, ಮಡಿವಾಳ ಮಾಚಿತಂದೆಯ ಕೃಪೆಯಿಂದಲಾನು ಬದುಕಿದೆನಯ್ಯಾ, ಕೂಡಲಸಂಗಮದೇವಾ.