ಬಸವಣ್ಣ   
Index   ವಚನ - 1309    Search  
 
ಮರುಗದ ಗಿಡುವಿನಂತೆ ಹುಟ್ಟುತ್ತಲೆ ಪರಿಮಳ, ಎರವಿನ ಬಣ್ಣದೊರೆಗೆಡಿಸಿದ ಪರಿಯ ನೋಡಾ. ಹರನ ಪ್ರೇರಣೆಯೊಳಗೆ ಹಿರಿದೊಂದು ವಾರುಧಿ, ವಾರುಧಿಯೊಳಗಣ ಕಮಲ ಬಾಡಿ, ಕಮಲದೊಳಗೆ ಸುಳಿವ ಭ್ರಮರನ ಪಕ್ಕ ಮುರಿದು ಉರುಳಿದಡೆ ನಿರಂಜನವಾಯಿತ್ತು ನೋಡಾ. ಹರಿಗೊಯಿದ ಮಿಂಚಿನ ಗೊಂಚಲ ನೆರೆವೋತು, ಇಂದುಕೋಟಿಪ್ರಭೆಯ ಶಾಂತಿಯನೊಳಕೊಂಡು ಕೂಡಲಸಂಗಮದೇವರ ನೆರೆವೋತ ಪ್ರಭುದೇವರ ಶ್ರೀಪಾದದಲ್ಲಿ ಭೃಂಗನಾಗಿ ಬದುಕಿದೆನು.