ಬಸವಣ್ಣ   
Index   ವಚನ - 1331    Search  
 
ಲಿಂಗಗಂಭೀರದೊಳಗೆ ಜಗ ಹುಟ್ಟಿದಡೇನು, ಆ ಲಿಂಗದಿಂದ ಘನವೆ? ಶಿವಲಿಂಗದೊಳಗೆ ಜಗ, ಜಗದೊಳಗೆ ಶಿವಲಿಂಗ, ಲೋಕಾದಿ ಲೋಕಂಗಳಿಗೆ ನೀನು ಭಕ್ತಿಯ ಕಂದೆರೆದು ತೋರಿದೆ, ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣಾ, ನಿನ್ನ ಶ್ರೀಪಾದಕ್ಕೆ ನಮೋ ನಮೋ ಎನುತ್ತಿರ್ದೆನು.