ಬಸವಣ್ಣ   
Index   ವಚನ - 1340    Search  
 
ಲಿಂಗವಿರದೆ ಸೀಮೆಯ ಕಲ್ಲಿನಲ್ಲಿ? ಲಿಂಗವಿರದೆ ಪಶುವಿನ ತೊಡೆಯಲ್ಲಿ? ಕಲ್ಲ ತೆಕ್ಕೊಂಡು ಮೆಳೆಯ ಮೇಲೆ ಇಟ್ಟಡೆ, ಆ ಕಲ್ಲು ಮೆಳೆಯಲ್ಲಿ ಸಿಕ್ಕಿದಡೆ ಆ ಮೆಳೆ ಭಕ್ತನಾಗಬಲ್ಲುದೆ? ಇದು ಕಾರಣ ಸತ್ಯ, ಸಹಜ, ಸದ್ಭಾವ, ಸದ್ವರ್ತನೆ ಉಳ್ಳಡೆ ಸದ್ಭಕ್ತ, ಇಲ್ಲದಿದ್ದಡೆ ಆ ಮೆಳೆಯೊಳಗೆ ಸಿಕ್ಕಿ ಕಲ್ಲಿನಂತೆ ಕಾಣಾ ಕೂಡಲಸಂಗಮದೇವಾ.