ಬಸವಣ್ಣ   
Index   ವಚನ - 1358    Search  
 
ಶರಣೆಂದು ಪಾದವ ಹಿಡಿದಿಹೆನೆಂದಡೆ ಚರಣದ ನಿಲವು ಕಾಣಬಾರದು, ಕುರುಹುವಿಡಿದೆಯೆನೆಂದಡೆ ಕೈಗೆ ಸಿಲುಕದು, ಬೆರಸಿ ಹೊಕ್ಕೆಹೆನೆಂದಡೆ ಮುನ್ನವೆ ಅಸಾಧ್ಯ. ಅಕಟಕಟಾ, ಅಹಂಕಾರದಲ್ಲಿ ಕೆಟ್ಟೆನಲ್ಲಾ, ಗುರುವೆ, ಎನ್ನ ಪರಮಗುರುವೆ ಬಾರಯ್ಯಾ, ಅರಿಯದ ತರಳನ ಅವಗುಣವ ನೋಡುವರೆ ಕೂಡಲಸಂಗಮದೇವಾ?