ಬಸವಣ್ಣ   
Index   ವಚನ - 1359    Search  
 
ಶಾಂತಿಯ ಮಾಡಹೋದಡೆ ಬೇತಾಳವಾಯಿತ್ತಯ್ಯಾ. ಸೀತಾಳದಾಪ್ಯಾಯನವಾಯಿತೆಂದಡೆ ಪರಹಿತಾರ್ಥವೆಂದು ತೋರಿದೆನೆನ್ನ ಪ್ರಾಣಲಿಂಗವನು. ನೇಮವ ಮಾಡಲೆಂದು ಕೊಟ್ಟಡೆ ಕೊಂಡೋಡಿ ಹೋದನು ಅನಿಮಿಷನು. ಅಭವನ ಮಹಾಮನೆಯ ಹೊಕ್ಕಡೆ ಎನಗೆ ಹೇಯವನೊಡ್ಡಿ ಅರಸೆಂದು ಕಳುಹಿದನು. ಅಳಲಿ ಬಳಲಿ ತೊಳಲಿ ಆಡಿ ಹಾಡಿ ಹಂಬಲಿಸಿ, ಅನಂತ ಅವಸ್ಥೆಯಿಂದ ಲಕ್ಷದ ಮೇಲೆ ತೊಂಬತ್ತಾರುಸಾವಿರ ವಚನವ ಹಾಡಿ, ಆಚಾರ ವಿಚಾರದಿಂದ ವಿಚಿತ್ರನಭಯವ ಕೊಟ್ಟು ಕಳುಹಿಸಿದನಯ್ಯಾ. ಗೊಹೇಶ್ವರನ ಶರಣ ತೋರಿದಡರಿದೆನು ಕೂಡಲಸಂಗಮದೇವರ.