ಬಸವಣ್ಣ   
Index   ವಚನ - 1384    Search  
 
ಸಾಕಾರ ನಿರಾಕಾರದೊಳಗೆ ನಿರವಯಾಂಗನಾಗಿ ಸುಳಿದು, ಭಕ್ತರ ಭವವ ಹರಿಯಲೆಂದು ಬಂದ ಜಂಗಮದ ಪರಿಯ ನೋಡಾ. ಉಣಲುಡಲು ಬಂದವನಲ್ಲ ಪ್ರಭುದೇವರು, ತ್ರಿವಿಧದಾಸೆ ಮುನ್ನವೆಯಿಲ್ಲ, ಪ್ರಭುದೇವರಿಗೆ. ಭಕ್ತನೆಂಬ ತನ್ನಂಗವ ತನ್ನೊಳೈಕ್ಯವ ಮಾಡಿಕೊಂಡು, ನಿರವಯವಾಗ ಬಂದ ನಿರವಯನಯ್ಯಾ, ಕೂಡಲಸಂಗಮದೇವರಲ್ಲಿ ಪ್ರಭುದೇವರು.