Index   ವಚನ - 11    Search  
 
ಕಕ್ಕಯ್ಯನ ಪ್ರಸಾದವ ಕೊಂಡೆನ್ನ ಕುಲಸೂತಕ ಹೋಯಿತ್ತಯ್ಯಾ, ಚೆನ್ನಯ್ಯನ ಪ್ರಸಾದವ ಕೊಂಡೆನ್ನ ಛಲಸೂತಕ ಹೋಯಿತ್ತಯ್ಯಾ, ದಾಸಯ್ಯನ ಪ್ರಸಾದವ ಕೊಂಡೆನ್ನ ತನುಸೂತಕ ಹೋಯಿತ್ತಯ್ಯಾ, ಚಂದಯ್ಯನ ಪ್ರಸಾದವ ಕೊಂಡೆನ್ನ ಮನಸೂತಕ ಹೋಯಿತ್ತಯ್ಯಾ, ತೆಲುಗ ಜೊಮ್ಮಯ್ಯನ ಪ್ರಸಾದವ ಕೊಂಡೆನ್ನ ನೆನಹುಸೂತಕ ಹೋಯಿತ್ತಯ್ಯಾ, ಬಿಬ್ಬ ಬಾಚಯ್ಯನ ಪ್ರಸಾದವ ಕೊಂಡೆನ್ನ ಭಾವಸೂತಕ ಹೋಯಿತ್ತಯ್ಯಾ, ಮೋಳಿಗಯ್ಯನ ಪ್ರಸಾದವ ಕೊಂಡೆನ್ನ ಜನನಸೂತಕ ಹೋಯಿತ್ತಯ್ಯಾ, ಕೋಲ ಶಾಂತಯ್ಯನ ಪ್ರಸಾದವ ಕೊಂಡೆನ್ನಂತರಂಗದ ಸೂತಕ ಹೋಯಿತ್ತಯ್ಯಾ, ಮೇದಾರ ಕೇತಯ್ಯನ ಪ್ರಸಾದವ ಕೊಂಡೆನ್ನ ಬಹಿರಂಗದ ಸೂತಕ ಹೋಯಿತ್ತಯ್ಯಾ, ಘಟ್ಟಿವಾಳಯ್ಯನ ಪ್ರಸಾದವ ಕೊಂಡೆನ್ನ ಸರ್ವಾಂಗದ ಸೂತಕ ಹೋಯಿತ್ತಯ್ಯಾ ಬಸವಣ್ಣ, ಚೆನ್ನಬಸವಣ್ಣ, ಪ್ರಭುದೇವರು, ಮಡಿವಾಳಯ್ಯ, ಸಿದ್ಧರಾಮಯ್ಯ, ಸೊಡ್ಡರ ಬಾಚರಸರು, ಹಡಪದಪ್ಪಣ್ಣ, ಶಂಕರ ದಾಸಿಮಯ್ಯ, ಹೆಂಡದ ಮಾರಯ್ಯಾ, ಗಾಣದ ಕಣ್ಣಪ್ಪಯ್ಯ, ಕೈಕೂಲಿ ಚಾಮಯ್ಯ, ಬಹುರೂಪಿ ಚೌಡಯ್ಯ, ಕಲಕೇತ ಬ್ರಹ್ಮಯ್ಯ ಮೊದಲಾದ ಶಿವಗಣಂಗಳ ಪರಮಪ್ರಸಾದವ ಕೊಂಡು ಬದುಕಿದೆನಯ್ಯಾ, ಮಹಾಘನ ಸದ್ಗುರು ಸಿದ್ಧಸೋಮನಾಥಲಿಂಗವೆ ನಿಮ್ಮ ಧರ್ಮ, ನಿಮ್ಮ ಧರ್ಮ.