Index   ವಚನ - 7    Search  
 
ಆಡುವಡೆ ಸದಾಚಾರಿಗಳ ಕೂಡೆ ಆಡುವದು. ನುಡಿವಡೆ ಜಂಗಮಪ್ರೇಮಿಯ ಕೂಡೆ ನುಡಿವುದು. ಮಾತಾಡುವಡೆ ಪ್ರಸಾದಿಯ ಕೂಡೆ ಮಾತನಾಡುವದು. ಭಕ್ತಿಹೀನನ ಕಂಡಡೆ ಮನ ಮುನಿಸ ಮಾಡಿಸಾ ರೇಕಣ್ಣಪ್ರಿಯ ನಾಗಿನಾಥಾ.