Index   ವಚನ - 21    Search  
 
ಕಳ್ಳನ ಕೈಯಲ್ಲಿ ಒಂದು ಒಳ್ಳಿಹ ರತ್ನವ ಕಂಡಡೆ ಎಲ್ಲರೂ ಬಂದು ತಲೆವಿಡಿವರಯ್ಯಾ. ಆ ರತ್ನವ ರತ್ನವ್ಯವಹಾರಿ ಕೊಟ್ಟು ಕೊಂಡಡೆ ಆರೂ ಬಾಯಲೆತ್ತಲಮ್ಮರು. ಶೈವ ಗುರುವಿನ ಕೈಯಲ್ಲಿ ಸಾಹಿತ್ಯವಾದ ಲಿಂಗವನು ವೀರಶೈವ ಗುರುವಿನ ಕೈಯಲ್ಲಿ ಕೊಟ್ಟು ಮರಳಿ ಕೊಂಡಡೆ ಆತ ಇಹಲೋಕ ಪೂಜ್ಯನು, ಪರಲೋಕ ಪೂಜ್ಯನು. ನಿಮ್ಮಾಣೆ, ನಿಮ್ಮ ಪ್ರಮಥರಾಣೆ ತಪ್ಪದು ರೇಕಣ್ಣಪ್ರಿಯ ನಾಗಿನಾಥಾ.