Index   ವಚನ - 41    Search  
 
ಬಸವಣ್ಣನಿಂದ ಶುದ್ಧಪ್ರಸಾದಿಯಾದೆ. ಚನ್ನಬಸವಣ್ಣನಿಂದ ಸಿದ್ಧಪ್ರಸಾದಿಯಾದೆ. ಪ್ರಭುದೇವರಿಂದ ಪ್ರಸಿದ್ಧಪ್ರಸಾದಿಯಾದೆ. ಇವರೆಲ್ಲರ ಪ್ರಸಾದಿಯಾಗಿ ರೇಕಣ್ಣಪ್ರಿಯ ನಾಗಿನಾಥನಲ್ಲಿ ಸೊಬಗ ಮೆರೆದೆ.