Index   ವಚನ - 25    Search  
 
ಮೂರಂಗುಲದಲ್ಲಿ ಅಳೆದು, ಐದಂಗುಲದಲ್ಲಿ ಪ್ರಮಾಣಿಸಿ ಆರಂಗುಲದಲ್ಲಿ ವಟ್ಟಕ್ಕೆ ಶುದ್ಧವಾಯಿತ್ತು. ಎಂಟರಳತೆ ಹದಿನಾರರ ಚದುರಸ ಮೂವತ್ತೆರಡರ ಮಧ್ಯದಲ್ಲಿ ಹಸ್ತಕಂಬಿಯನಿಕ್ಕಿ ಮೂರರಲ್ಲಿ ಭಾಗಿಸಲಾಗಿ, ಎರಡು ಒಳಗು ನಿಂದಿತ್ತು. ಒಂದು ಹೊರಗಾದ ಕೈಸಾಲೆಯಾಯಿತ್ತು. ಈ ಕೆಲಸವ ಹೊರಗೆ ಬಾಚಿಯಲ್ಲಿ ಸವೆದೆ,ಒಳಗೆ ಉಳಿಯಲ್ಲಿ ಸವೆದೆ. ಇಂತೀ ತೆರನ ತಿಳಿದಡೆ ಬಸವಣ್ಣಪ್ರಿಯ ವಿಶ್ವಕರ್ಮಟಕ್ಕೆ ಕಾಳಿಕಾವಿಮಲ ರಾಜೇಶ್ವರಲಿಂಗವಲ್ಲದಿಲ್ಲಾ ಎಂದೆ.