Index   ವಚನ - 1    Search  
 
ಊರೊಳಗಣ ಹೊಲೆಯ, ಊರ ಹೊರಗಣ ಕುಲಜ. ಇವರಲ್ಲಿ ಆರು ಹಿರಿ[ಯರೆಂಬುದ] ಬಲ್ಲಡೆ ಲಿಂಗಪ್ರಾಣಸಂಬಂಧಿಯೆಂಬೆ. ಅರಿಯದಿರ್ದಡೆ ಪ್ರಾಣಲಿಂಗಸಂಬಂಧಿಯೆಂಬೆ. ಇಂತೀ ಉಭಯವನರಿದ ಶರಣ ಸರ್ವಾಂಗಲಿಂಗಸಂಬಂಧಿ. ಆತಂಗೆ ತತ್ತುಗೊತ್ತಿಲ್ಲ, ಇಷ್ಟ ಪ್ರಾಣವೆಂಬ ಗುತ್ತಗೆಯವನಲ್ಲ. ಕರ್ಪುರ ಉರಿ ಉಭಯರೂಪು ತನ್ಮಯವಾದಂತೆ ಕಮಠೇಶ್ವರಲಿಂಗದಲ್ಲಿ ಸದಾಸನ್ನದ್ಧನಾದ ಶರಣನು.